
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ರಾತ್ರಿ ಪುಲ್ವಾಮಾದ ಚೆವಾಕ್ಲಾನ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಲಾಗಿದೆ; ಒಬ್ಬ ಪಾಕಿಸ್ತಾನಿ ಸೇರಿದಂತೆ ಜೆಇಎಂನ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಇಂದು ಬೆಳಿಗ್ಗೆ ಗಂದರ್ ಬಾಲ್ ನ ಸೆರ್ಚ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಎಲ್‌ಇಟಿಯ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಘಟನಾ ಸ್ಥಳ ಸುತ್ತವರೆದಿರುವ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ.