ದಾವಣಗೆರೆ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರಷ್ಟೇ ಸಾಲದು, ಅಂತಹವರನ್ನು ಎನ್ ಕೌಂಟರ್ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡ ಗಲಾಟೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
ಕೋಮು ಗಲಭೆಯಲ್ಲಿ ಪಾಲ್ಗೊಂಡವರ ಮೇಲಿನ ಕೇಸ್ ಗಳನ್ನು ಹಿಂಪಡೆಯಬಾರದು. ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧಡೆ ಗಲಭೆಯಲ್ಲಿ ಭಾಗವಹಿಸಿದವರ ವಿರುದ್ಧದ ಕೇಸ್ ವಾಪಸ್ ಪಡೆದರೆ ಅನಾಹುತವಾಗುತ್ತದೆ. ತಪ್ಪು ಯಾರೇ ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲಿ. ಆದರೆ, ಬಿಜೆಪಿಯವರು ಗಲಾಟೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನವರು ಆರೋಪಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.