
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರು, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಪುಲ್ವಾಮಾ ಬಳಿ ಗುಂಡಿನ ದಾಳಿ ನಡೆಸಲಾಗಿದ್ದು, ಬಿಎಸ್ಎಫ್ ಯೋಧರು ಓರ್ವ ಉಗ್ರನನ್ನು ಸುತ್ತುವರಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ.
ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಆದರೆ ಅವನ ದೇಹವನ್ನು ಇನ್ನೂ ಪಡೆಯಲಾಗಿಲ್ಲ. ಪುಲ್ವಾಮಾ ಜಿಲ್ಲೆಯ ಅರ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ದೊರೆತ ನಂತರ ಪ್ರಾರಂಭವಾದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಉಗ್ರರು ಶೋಧ ತಂಡದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಒಬ್ಬ ಭಯೋತ್ಪಾದಕ ಪತನಗೊಂಡಿರುವ ಸಾಧ್ಯತೆಯಿದೆ, ಆತನ ದೇಹವನ್ನು ನೋಡಲಾಗಿದೆ. ಆದರೆ, ಇನ್ನೂ ವಶಕ್ಕೆ ಪಡೆಯಲಾಗಿಲ್ಲ. ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.