ಮಂಗಳೂರು: ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ ನಡೆದ ಮೆಸ್ಕಾಂ ಕೆಪಿಟಿಸಿಎಲ್ ಸಭೆಯಲ್ಲಿ ಅವರು ಮಾತನಾಡಿ, ಗುಜರಾತ್, ರಾಜಸ್ಥಾನದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಈ ಶಕ್ತಿಯನ್ನು ಸರಕು ರೂಪದಲ್ಲಿ ಕಂಟೇನರ್ ಗಳಲ್ಲಿ ಸಾಗಿಸಬಹುದಾಗಿದೆ. ರಾಜ್ಯದಲ್ಲಿ ಹೆಚ್ಚಾಗಿರುವ ವಿದ್ಯುತ್ ಬೇಡಿಕೆಯನ್ನು ಗ್ರೀನ್ ಹೈಡ್ರೋಜನ್ ಪೂರೈಸಲಿದೆ. ಇದನ್ನು ರಫ್ತು ಕೂಡ ಮಾಡಬಹುದಾಗಿದೆ. ಹೀಗಾಗಿ ಹೊಸ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದ್ದಾರೆ.