ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ವಿದ್ಯುತ್ ಪೂರೈಕೆಯಲ್ಲಿ ಸ್ವಲ್ಪ ತೊಂದರೆಯಾಗಿತ್ತು. ಅದೆಲ್ಲವೂ ಸರಿಯಾಗಿದೆ. ಅಗತ್ಯವಾದರೆ ವಿದ್ಯುತ್ ಖರೀದಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅವರ ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ ಎಂದು ಅವರು ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.