ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಖಾರದಪುಡಿ ಮಹೇಶ್ ಮತ್ತು ಅವರ ಕುಟುಂಬದ ಒಡೆತನಕ್ಕೆ ಸೇರಿದ 17.24 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ಆಕ್ರಮ ಗಣಿಗಾರಿಕೆ ಆರೋಪ ಹಿನ್ನೆಲೆಯಲ್ಲಿ ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರದಲ್ಲಿ ವಸತಿ ಕಟ್ಟಡಗಳು, ಜಮೀನು, ವಾಣಿಜ್ಯ ಕಟ್ಟಡ ಮೊದಲಾದವುಗಳನ್ನು ಒಳಗೊಂಡ 25 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಈ ಹಿಂದೆ 54.18 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣದಲ್ಲಿ ಒಟ್ಟು 71.42 ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಲೋಕಾಯುಕ್ತ ವಿಶೇಷ ತನಿಖಾ ತಂಡ ಅಕ್ರಮ ಗಣಿಗಾರಿಕೆ ಕುರಿತ ತನಿಖೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ. ತನಿಖಾ ವರದಿ ಆಧರಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸಿ ಆಸ್ತಿ ಜಪ್ತಿ ಮಾಡಿದ್ದಾರೆ ಎಂದು ಹೇಳಲಾಗಿದೆ.