ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ.
ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜಾರಿ ನಿರ್ದೇಶನಾಲಯವು ಈ ಮಾಹಿತಿ ಹಂಚಿಕೊಂಡಿದೆ. ಇಡಿ ಸಲ್ಲಿಸಿದ ವರದಿಯನ್ನು ವಿಶೇಷ ನ್ಯಾಯಾಲಯ ಪರಿಗಣನೆಗೆ ಪಡೆದುಕೊಂಡಿದೆ.
“ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ಗೌರವಾನ್ವಿತ ವಿಶೇಷ ನ್ಯಾಯಾಲಯಕ್ಕೆ ಬೆಂಗಳೂರು ಇಡಿ ಪ್ರಾಸಿಕ್ಯೂಷನ್ ದೂರು(ಪಿಸಿ) ಸಲ್ಲಿಸಿದೆ. ಗೌರವಾನ್ವಿತ ನ್ಯಾಯಾಲಯವು ಪಿಸಿಯನ್ನು ಪರಿಗಣನೆಗೆ ತೆಗೆದುಕೊಂಡಿದೆ.” ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.