ಬೆಂಗಳೂರು: ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಶುಲ್ಕವನ್ನು 40,000 ರೂ. ನಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಖಾಸಗಿ ವಿವಿಗಳಲ್ಲಿ ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 62,000 ರೂ. ಬೋಧನಾ ಶುಲ್ಕ, 20,000 ರೂ. ಇತರೆ ಶುಲ್ಕ ಹಾಗೂ ಸ್ಕಿಲ್ಸ್ ಲ್ಯಾಬ್ ಸೌಲಭ್ಯಕ್ಕೆ 10 ರಿಂದ 20 ಸಾವಿರ ರೂಪಾಯಿವರೆಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕಿದೆ.
ಖಾಸಗಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದ್ದರೂ, ಕೂಡ ಪರೋಕ್ಷವಾಗಿ ಶುಲ್ಕ ಹೆಚ್ಚಳಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದಾಗಿ ಸರ್ಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕೆ 40,000 ರೂ.ವರೆಗೆ ಹೆಚ್ಚುವರಿಯಾಗಿ ಪಾವತಿಸಬೇಕಿದೆ.