ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ರಾಜ್ಯದಲ್ಲಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೆಲ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಸಿದ್ಧಾರ್ಥ್ ಕಾಲೇಜಿನಲ್ಲಿ ನಡೆದಿದೆ.
21 ವರ್ಷದ ಕವಿತಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಮೈಸೂರು ಮೂಲದವಳಾಗಿದ್ದು, ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಳು. ಸಿದ್ದಾರ್ಥ್ ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನ ಸಂಗಮಿತ್ರ ಬ್ಲಾಕ್ ನಲ್ಲಿ ತಡರಾತ್ರಿ ಕವಿತಾ ನೇಣಿಗೆ ಶರಣಾಗಿದ್ದಾಳೆ.
ಸಂಜೆ ‘ಸ್ನ್ಯಾಕ್ಸ್’ ಗೆ ರುಚಿಯಾದ ಬಾಳೆಹಣ್ಣಿನ ಟೋಸ್ಟ್
ಕವಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.