ರೈಲು ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಡಿಕ್ಕಿ ಹೊಡೆದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ರೈಲ್ವೆ ಪೊಲೀಸರ ಪ್ರಕಾರ, ಪಾಲ್ಘರ್ನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಬುಧವಾರ ಬೆಳಿಗ್ಗೆ ಪ್ರಾಣ ಕಳೆದುಕೊಂಡಿದ್ದಾಳೆ.
ಪಾಲ್ಘರ್ ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿದ್ದಾಗ ರೈಲಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಮೃತರು ಪಾಲ್ಘರ್ನ ಸೇಂಟ್ ಜಾನ್ ಕಾಲೇಜ್ ಆಫ್ ಇಂಜಿನಿಯರಿಂಗ್ನಲ್ಲಿ ಓದುತ್ತಿದ್ದರು ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ವಿದ್ಯಾರ್ಥಿನಿ ವಿರಾರ್ನಲ್ಲಿ ರೈಲನ್ನು ಹತ್ತಿ ಪಾಲ್ಘರ್ನಲ್ಲಿ ಇಳಿದ ನಂತರ ಹಳಿ ದಾಟಲು ಪ್ರಯತ್ನಿಸುತ್ತಿದ್ದಾಗ ಆಗಸ್ಟ್ ಕ್ರಾಂತಿ ಎಕ್ಸ್ ಪ್ರೆಸ್ಗೆ ಡಿಕ್ಕಿ ಹೊಡೆದಿದೆ. ಸದ್ಯ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.