ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಂದಾಪುರದ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ನಡೆದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿನಿ ಹರ್ಷಿತಾ ತನ್ನ ಹಾಸ್ಟೇಲ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ನಿವಾಸಿಯಾಗಿರುವ ಹರ್ಷಿತಾ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಳು.
ಇದೀಗ ಇದ್ದಕ್ಕಿದ್ದಂತೆ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ. ವಿದ್ಯಾರ್ಥಿನಿ ಸಾವು ಖಂಡಿಸಿ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸ್ಟೇಲ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ವಾರ್ಡನ್ ಕೂಡ ಇಲ್ಲ. ಹಾಸ್ಟೇಲ್ ಹಾಗೂ ಕಾಲೇಜಿನಲ್ಲಿರುವ ಒಂದೇ ಒಂದು ಸಿಸಿಟಿವಿ ಕ್ಯಾಮರಾ ಕಾರ್ಯನಿರ್ವಹಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಸಮಸ್ಯೆಯಾದರೂ ಯಾರೂ ಸ್ಪಂದಿಸುತ್ತಿಲ್ಲ. ಕಾಲೇಜು ಆಡಳಿತ ಮಂಡಳಿಯ ಕಿರುಕುಳಕ್ಕೆ ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.