alex Certify BIG NEWS: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮೆಟ್ರೋದಲ್ಲಿ ಯುವತಿಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆನ್ನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟರಸ್ತೆಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಗೆ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಹೋಟೆಲ್ ಗೆ ಬಿಲ್ ಕೊಡಲು ಹೋದಾಗ ಹೋಟೆಲ್ ನಲ್ಲಿದ್ದ ಯುವಕ ಬಾಗಿಲು ಮುಚ್ಚಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿ ಕಬೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...