ಬೆಂಗಳೂರು : ರಾಜ್ಯ ಸರ್ಕಾರವು 2023-24 ನೇ ಸಾಲಿನ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಶೇ. 7 ಕ್ಕೆ ಇಳಿಸಿದ್ದ ರಾಜ್ಯ ಸರ್ಕಾರ ಇದೀಗ ಅಧಿಕೃತವಾಗಿ ಶುಲ್ಕ ವಿವರ ಪ್ರಕಟಿಸಿದೆ.
ರಾಜ್ಯ ಸರ್ಕಾರ ಪ್ರಕಟಿಸಿದ ಅಧಿಕೃತ ಶುಲ್ಕದ ಪ್ರಕಾರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ರ್ಯಾಕಿಂಗ್ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವ ಸರ್ಕಾರಿ ಎಂಜಿನಿಯರಿಂಗ್ ಮತ್ತು ಅನುದಾನಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸೀಟು ಶುಲ್ಕ 40,110 ರೂ. ಹಾಗೂ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಸೀಟುಗಳ ಶುಲ್ಕ 69,214 ರೂ. ನಿಗದಿಪಡಿಸಲಾಗಿದೆ.
ಕಾಮೆಡ್-ಕೆ, ಸಿಇಟಿ ರ್ಯಾಕಿಂಗ್ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿ ಕೋಟಾ ಸೀಟುಗಳಿಗೆ 1,69,192 ರೂ. ಮತ್ತು 2,37,706 ರೂ. ನಿಗದಿಪಡಿಸಲಾಗಿದೆ.