alex Certify ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳು

ತುಮಕೂರು: ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಮೂವರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಿಕ್ಕನಾಯಕನಹಳ್ಳಿ ಪಟ್ಟಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಮೂವರು ಇಂಜಿನಿಯರ್ ಗಳು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಲ್ ಪಾಸ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಮಹೇಶ್, ಹೊರಗುತ್ತಿಗೆ ಇಂಜಿನಿಯರ್ ಶಶಿಕುಮಾರ್, ಸಹಾಯಕ ಇಂಜಿನಿಯರ್ ಕಿರಣ್ ಅವರನ್ನು ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗಲೇ ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...