alex Certify BIG NEWS: 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ.

2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ(ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು 2024-25ನೇ ಸಾಲಿನ(ಫೆಬ್ರವರಿ) ಅಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ.

ಸರ್ಕಾರಿ ಶಾಲೆಗಳ ಶೈಕ್ಷಣಿಕ ಬಲವರ್ಧನೆಗಾಗಿ ಹಾಲಿ ನಡೆಯುತ್ತಿರುವ ಪ್ರಾಥಮಿಕ ಶಾಲೆಗಳಿಗೆ ಅಗತ್ಯಾನುಸಾರ 1ನೇ ತರಗತಿಯಿಂದ ಹೊಸದಾಗಿ ಆಂಗ್ಲ ಮಾಧ್ಯಮ(ದ್ವಿಭಾಷ ಮಾಧ್ಯಮ) ಪ್ರಾರಂಭಿಸಲು ಈ ಹಿಂದೆ ನಿಗದಿಡಿಸಿದ ಮಾನದಂಡಗಳಂತೆ ಪ್ರಸ್ತಾವನೆ ಪಡೆದು ತಾಲ್ಲೂಕು / ಜಿಲ್ಲಾ / ವಿಭಾಗ ಹಂತದಲ್ಲಿ ಪರಿಶೀಲನಾ ಸಮಿತಿಗಳು ಪರಿಶೀಲಿಸಿ ಶಿಫಾರಸ್ಸು ಮಾಡಲು ಚೆಕ್ ಲಿಸ್ಟ್ ನೊಂದಿಗೆ ವೇಳಾ ಪಟ್ಟಿ ನಿಗದಿಪಡಿಸಿ ಸುತ್ತೋಲೆ ಮೂಲಕ ಸೂಚಿಸಿದ್ದು, ಆದರಂತೆ ಸ್ವೀಕೃತವಾಗಿರುವ ಪ್ರಸ್ತಾವನೆಗಳನ್ನು ಪರಿಶೀಲಿಸಿ ಒಟ್ಟು 1419 ಶಾಲೆಗಳಲ್ಲಿ 2024-25ನೇ ಸಾಲಿನಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ. (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿನ ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ(ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...