ಬೆಂಗಳೂರು: ಸಂವಹನ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದೆ.
ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆ ಆರಂಭಿಸಿ ಯಶಸ್ವಿಯಾಗಿದ್ದು, ಈಗ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ಆರಂಭಿಸಲಾಗುವುದು. ಪ್ರತಿವಾರ ಕೊನೆಯ ಒಂದು ಅಥವಾ ಎರಡು ದಿನ ನುರಿತ ಇಂಗ್ಲಿಷ್ ಶಿಕ್ಷಕರಿಂದ ಮಕ್ಕಳಿಗೆ ಇಂಗ್ಲಿಷ್ ಕಲಿಸಲಾಗುತ್ತದೆ.
ಎಲ್ಲಾ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ವಿಷಯವಾರು ಶಿಕ್ಷಕರು ಮತ್ತು ಸೌಲಭ್ಯ ಇಲ್ಲದ ಕಾರಣ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಆರಂಭಿಸಲಾಗುವುದು. ಇರುವ ಶಿಕ್ಷಕರನ್ನೇ ಆಯ್ಕೆ ಮಾಡಿಕೊಂಡು ವಿಶೇಷ ತರಬೇತಿ ನೀಡಲಾಗುವುದು.