![](https://kannadadunia.com/wp-content/uploads/2024/01/JEE-Main-Joint-entrance-exam-btech-barch-nta.png)
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಫೆಬ್ರವರಿ 18 ರಂದು ನಡೆಯುವ ಯು.ಪಿ.ಎಸ್.ಸಿ/ಕೆ.ಎ.ಎಸ್/ಎಸ್.ಎಸ್.ಸಿ/ಆರ್.ಆರ್.ಬಿ/ಬ್ಯಾಂಕಿಂಗ್/ಗ್ರೂಪ್-ಸಿ ಉಚಿತ ತರಬೇತಿ ಪ್ರವೇಶ ಪರೀಕ್ಷೆಯ ವಸ್ತ್ರಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
- ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು.
ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
- ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.
- ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ
ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
- ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
- ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
- ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
![](https://kannadadunia.com/wp-content/uploads/2024/02/WhatsApp-Image-2024-02-08-at-7.14.52-PM.jpeg)
![](https://kannadadunia.com/wp-content/uploads/2024/02/WhatsApp-Image-2024-02-08-at-7.14.53-PM.jpeg)