alex Certify ʻUPSC, KAS, RRBʼ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿಗೆ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻUPSC, KAS, RRBʼ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿಗೆ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಫೆಬ್ರವರಿ 18 ರಂದು ನಡೆಯುವ ಯು.ಪಿ.ಎಸ್.ಸಿ/ಕೆ.ಎ.ಎಸ್/ಎಸ್.ಎಸ್.ಸಿ/ಆರ್.ಆರ್.ಬಿ/ಬ್ಯಾಂಕಿಂಗ್/ಗ್ರೂಪ್-ಸಿ ಉಚಿತ ತರಬೇತಿ ಪ್ರವೇಶ ಪರೀಕ್ಷೆಯ ವಸ್ತ್ರಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:

  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು.

ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.

  • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.
  • ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ

ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.

  • ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  • ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...