ಮಹತ್ವದ ಬೆಳವಣಿಗೆಯೊಂದರಲ್ಲಿ ಡಿಜಿಟಲ್ ಮೀಡಿಯಾಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಶೀಘ್ರದಲ್ಲಿಯೇ ಡಿಜಿಟಲ್ ಮಾಧ್ಯಮಗಳ ಕಾರ್ಯನಿರ್ವಹಣೆ, ನೋಂದಣಿ ಹಾಗೂ ನಿಯಂತ್ರಣ ಕುರಿತಂತೆ ಹೊಸ ಕಾನೂನು ಜಾರಿಗೆ ಬರಲಿದೆ.
ರಾಜಸ್ಥಾನದ ಜೈಪುರದಲ್ಲಿ ಮಾತನಾಡಿರುವ ಕೇಂದ್ರ ವಾರ್ತಾ ಹಾಗೂ ಪ್ರಸಾರ ಸಚಿವ ಅನುರಾಗ್ ಠಾಗೂರ್ ಈ ಕುರಿತಂತೆ ಮಾಹಿತಿ ನೀಡಿದ್ದು, ಮೊದಲು ಸುದ್ದಿ ನೀಡಬೇಕೆಂಬ ಧಾವಂತದಲ್ಲಿ ಡಿಜಿಟಲ್ ಮಾಧ್ಯಮಗಳು ಕೆಲವೊಮ್ಮೆ ಮಿತಿಮೀರಿದ ವರ್ತನೆ ತೋರುತ್ತಿವೆ ಹೀಗಾಗಿ ಇದಕ್ಕೆ ಅಂಕುಶ ಅಗತ್ಯ ಎಂದರು.
ಪ್ರಸ್ತುತ ಇಂಟರ್ನೆಟ್ ಯುಗದಲ್ಲಿ ಸುದ್ದಿ ಮಾಧ್ಯಮಗಳಿಗೆ ಒಳ್ಳೆಯ ಭವಿಷ್ಯವಿದೆ. ಅಲ್ಲದೆ ಇದರಿಂದ ಉತ್ತಮ ಉದ್ಯೋಗಾವಕಾಶಗಳು ಸಹ ದೊರೆಯುತ್ತವೆ. ಹೀಗಾಗಿ ಅವುಗಳ ಅಸ್ತಿತ್ವಕ್ಕೆ ಯಾವುದೇ ಧಕ್ಕೆ ಬರದಂತೆ ಕೆಲವೊಂದು ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.