ಕೊರೊನಾ ಸಮಯದಲ್ಲಿ ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನೇಕ ಜನರು ತಮ್ಮ ಭವಿಷ್ಯ ನಿಧಿ ಹಣವನ್ನು ವಾಪಸ್ ಪಡೆದಿದ್ದಾರೆ. ಆದ್ರೆ ಅನೇಕರಿಗೆ ಪಿಎಫ್ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಖಾತೆದಾರರ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ.
ಇಪಿಎಫ್‌ಒನ ಹೊಸ ನಿಯಮಗಳ ಪ್ರಕಾರ, ಪ್ರತಿಯೊಬ್ಬ ಖಾತೆದಾರರು ಪಿಎಫ್ ಖಾತೆಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈ ನಿಯಮವು ಸೆಪ್ಟೆಂಬರ್ 1 ರಿಂದ ಅಂದರೆ ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದೆ. ಮೊದಲು ಜೂನ್ 1 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಗಡುವನ್ನು ವಿಸ್ತರಿಸಲಾಗಿದೆ.
ಇಪಿಎಫ್ಒ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ನೀವು, ಖಾತೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು. ಮೊದಲು ಇಪಿಎಫ್ಒ ವೆಬ್‌ಸೈಟ್‌ಗೆ ಹೋಗಬೇಕು. ಅದಕ್ಕಾಗಿ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. https://unifiedportal-mem.epfindia.gov.in/memberinterface/ ಕ್ಲಿಕ್ ಮಾಡಿ. ನಂತ್ರ ಯುಎಎನ್ ಮತ್ತು ಪಾಸ್‌ವರ್ಡ್‌ನೊಂದಿಗೆ ಖಾತೆಗೆ ಲಾಗ್ ಇನ್ ಮಾಡಿ. ನಂತ್ರ ಮ್ಯಾನೇಜ್ ವಿಭಾಗದಲ್ಲಿರುವ ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಿ. ಅಲ್ಲಿ ಇಪಿಎಫ್ ಖಾತೆಯೊಂದಿಗೆ ಆಧಾರ್ ಲಿಂಕ್ ಮಾಡಲು ಹಲವು ದಾಖಲೆಗಳು ಸಿಗಲಿವೆ. ಅಲ್ಲಿ ಆಧಾರ್ ಆಯ್ಕೆ ಮೇಲೆ ಕ್ಲಿಕ್ ಮಾಡಿ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಹೆಸರನ್ನು ಟೈಪ್ ಮಾಡಿ ಸಲ್ಲಿಸಿ. ಕೆವೈಸಿ ದಾಖಲೆಗಳು ಸರಿಯಾಗಿದ್ದರೆ, ಆಧಾರ್ ಸಂಖ್ಯೆಯನ್ನು ಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡಲಾಗುತ್ತದೆ.