ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಕರೆ ತಂದಿದ್ದ ಕೊಲೆ ಆರೋಪಿ ಪರಾರಿಯಾಗಿದ್ದು, ಸಿನಿಮಾ ರೀತಿಯಲ್ಲಿ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಪುನಃ ಹಿಡಿದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಬೆಂಗಳೂರಿನ ಸದ್ದುಗುಂಟೆಪಾಳ್ಯ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮನೋಜ್ ನನ್ನು ಮಂಗಳವಾರ ನ್ಯಾಯಾಲಯಕ್ಕೆ ಪೊಲೀಸರು ಕರೆತಂದಿದ್ದಾರೆ. ಈತನನ್ನು ಹುಳಿಮಾವು ಮತ್ತು ರಾಜಾಜಿನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆಯಲು ಕೋರ್ಟ್ ಗೆ ಬಂದಿದ್ದರು.
ಜೀಪ್ ನಿಂದ ಇಳಿಯುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಂಡು ಮನೋಜ್ ಪರಾರಿಯಾಗಿದ್ದಾನೆ. ಆತನನ್ನು ಬೆನ್ನಟ್ಟಿದ ಪೊಲೀಸರು ಕೋರ್ಟ್ ಗೇಟ್ ಬಳಿ ಹಿಡಿದುಕೊಂಡಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನಿಟ್ಟುಸಿರುಬಿಟ್ಟಿದ್ದಾರೆ.