ನವದೆಹಲಿ: ಇ -ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ 29 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ -ಶ್ರಮ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ರಾಮೇಶ್ವರ ತೇಲಿ ಈ ವಿಷಯ ತಿಳಿಸಿದ್ದಾರೆ. ಅಸಂಘಟಿತ ಕಾರ್ಮಿಕರ ನೋಂದಣಿಗಾಗಿ 2021 ರಲ್ಲಿ ಇ-ಶ್ರಮ್ ಪೋರ್ಟಲ್ ಪ್ರಾರಂಭಿಸಲಾಯಿತು. ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಸಂಚಯವನ್ನು ರಚಿಸುವುದು ಮತ್ತು ಅಂತಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ವಿತರಣೆಯನ್ನು ಸುಲಭಗೊಳಿಸುವುದು ಇಶ್ರಾಮ್ ಪೋರ್ಟಲ್ ನ ಮುಖ್ಯ ಉದ್ದೇಶವಾಗಿದೆ.