
ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿಯಾಗಿವೆ. ರೈತರನ್ನು ಗುಲಾಮರನ್ನಾಗಿಸಲು ಷಡ್ಯಂತ್ರ ನಡೆಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕಲ್ಬುರ್ಗಿಯಲ್ಲಿ ಮಾತನಾಡಿದ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತರಿಗೆ ಮರಣ ಶಾಸನವಾಗಿದೆ. ರೈತ ವಿರೋಧಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಸರ್ಕಾರ ಮೊಂಡುತನ ಬಿಟ್ಟು ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಜನವರಿ 20 ರಂದು ಬೆಂಗಳೂರಿನ ಫ್ರೀಡಂಪಾರ್ಕ್ ನಿಂದ ರಾಜಭವನದವರೆಗೆ ರ್ಯಾಲಿ ಮೂಲಕ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ