alex Certify ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ; ಸಚಿವ ಖಂಡ್ರೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ; ಸಚಿವ ಖಂಡ್ರೆ ಘೋಷಣೆ

ಮೈಸೂರು: ಇನ್ನು ಮೂರು ತಿಂಗಳಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ 10,000 ಜನರಿಗೆ ಹಕ್ಕುಪತ್ರ ವಿತರಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ.

ಮೈಸೂರಿನಲ್ಲಿ ಅರಣ್ಯ ಇಲಾಖೆಯಿಂದ ಏರ್ಪಡಿಸಿದ್ದ 69ನೇ ವನ್ಯಜೀವಿ ಸಪ್ತಾಹದಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಕಾಡಂಚಿನ ಜನರಿಗೆ ಹಕ್ಕು ಪತ್ರ ಸಿಗದೆ ತೊಂದರೆಯಲ್ಲಿದ್ದಾರೆ. ಇದನ್ನು ಮನಗಂಡು ಹಕ್ಕು ಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಂಡಿದ್ದರು. ನಂತರ ಬಂದವರು ಹಕ್ಕುಪತ್ರ ವಿತರಿಸಲು ಮುಂದಾಗಲಿಲ್ಲ. ಈಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದು, ಮುಂದಿನ ಮೂರು ತಿಂಗಳಲ್ಲಿ ಕಾಡಿನಂಚಿನ 10,000 ಜನರಿಗೆ ಆದ್ಯತೆ ಮೇರೆಗೆ ಹಕ್ಕುಪತ್ರ ವಿತರಿಸುವುದಾಗಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...