
ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಅರಣ್ಯ ಬೆಳೆಸಲು ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ಸಭೆ ನಡೆಸಿದ ಸಚಿವರು ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಕಲಬುರಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ ಸಸಿ ಬೆಳೆಸಿ ನೀರುಣಿಸಿ ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಸೇರಿ ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸಬೇಕು. ಎತ್ತರದ ಸಸಿಗಳನ್ನು ಹೆಚ್ಚಾಗಿ ನೆಟ್ಟು ಅವುಗಳು ಒಣಗದಂತೆ ನಿರ್ವಹಿಸಬೇಕು. ಪ್ರತಿ ಸಸಿಗೂ ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸಬೇಕು ಎಂದು ಹೇಳಿದ್ದಾರೆ.