ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮೊದಲು ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.
ತಮ್ಮನ್ನು ಭೇಟಿಯಾದ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿದ ಸಚಿವರು ಮಾತನಾಡಿ, ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಕೃತಿ ಪರಿಸರ ಉಳಿದರೆ ಮಾತ್ರವೇ ನಾವು ಉಳಿಯಲು ಸಾಧ್ಯ. ಅರಣ್ಯ ಭೂಮಿ ಕಡಿಮೆಯಾದರೆ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತದೆ. ಅರಣ್ಯ ಸಂರಕ್ಷಣೆ ನಮ್ಮ ಕರ್ತವ್ಯ ಕೂಡ ಆಗಿದೆ. ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಹೇಳಿದ್ದಾರೆ.