ಕಲಬುರ್ಗಿ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪಾದಯಾತ್ರೆ ಬಳಿಕ ಇದೀಗ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಮೇಕೆದಾಟು ಪಾದಯಾತ್ರೆ ಮುಗಿಯುತ್ತಿದ್ದಂತೆ ಕಲ್ಯಾಣ ಕರ್ನಾಟಕ ಯಾತ್ರೆ ಆರಂಭಿಸುತ್ತಿದ್ದಾರೆ.
ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಪ್ರಿಯಕರನೊಂದಿಗೆ ಪತ್ನಿ ಪರಾರಿ, ಹುಡುಕಿಕೊಂಡು ಬಂದ ಪತಿ ಜೀವವೇ ಹೋಯ್ತು
ಕಲ್ಯಾಣ ಕರ್ನಾಟಕ ಯಾತ್ರೆ ರೂಪುರೇಷೆ ಸಿದ್ಧಗೊಳಿಸುತ್ತಿದ್ದೇವೆ. ಈಗಾಗಲೇ 2 ಬಾರಿ ಸಭೆ ಕರೆದು ಚರ್ಚೆ ನಡೆಸಲಾಗಿದೆ. ಏಪ್ರಿಲ್ ನಲ್ಲಿ ಯಾತ್ರೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಬಜೆಟ್ ನಲ್ಲಿ 3000 ಕೋಟಿ ನೀಡಿದ್ದಾರೆ. ಆದರೆ ಈ ಹಿಂದೆ ನೀಡಿದ್ದ ಹಣ ಖರ್ಚು ಮಾಡಿಲ್ಲ. ಹಣ ಬಿಡುಗಡೆ ಮಾಡಿದ್ದು ಖಜಾನೆಯಲ್ಲಿಟ್ಟುಕೊಂಡು ಪೂಜೆ ಮಾಡಲೇ? ಇಂತಹ ತೋರಿಕೆಯ ಅನುದಾನವಲ್ಲ, ನಿಜವಾದ ಅಭಿವೃದ್ಧಿ ಕೆಲಸಗಳು ನಡೆಯಬೇಕಿದೆ. ಈ ನಿಟ್ಟಿನಲ್ಲಿ ಹೋರಾಟ ನಡೆಸಲಾಗುವುದು ಎಂದರು.