ಬೆಂಗಳೂರು: ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಅರಣ್ಯ ಹಾಗೂ ಕಂದಾಯ ಇಲಾಖೆಯ ಭೂಮಿ ಗುರುತಿಸಲು ಜಂಟಿ ಸರ್ವೆ ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಡೀಮ್ಡ್ ಅರಣ್ಯ ಪ್ರದೇಶ ಗುರುತಿಸಲು ಅರಣ್ಯ ಹಾಗೂ ಕಂದಾಯ ಇಲಾಖೆ ಭೂಮಿ ಜೊತೆಗೆ ಖಾಸಗಿ ಭೂಮಿ ವಿಂಗಡಣೆಗಾಗಿ ಜಂಟಿ ಸರ್ವೆ ನಡೆಸಲಾಗುವುದು. ಸರ್ವೆಯರ್ ಕೊರತೆಯಿಂದಾಗಿ ವಿಳಂಬವಾಗಿದ್ದು, ಕಂದಾಯ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಅರಣ್ಯ ಹಾಗೂ ಕಂದಾಯ ಭೂಮಿ ಗುರುತಿಸಲು ಜಂಟಿ ಸರ್ವೆ ಕಾರ್ಯ ಕೈಗೊಳ್ಳಲು ಆರು ತಿಂಗಳ ಕಾಲಾವಕಾಶ ನೀಡುವಂತೆ ಅಧಿಕಾರಿಗಳು ಕೇಳಿದ್ದಾರೆ. ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.