alex Certify ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭ

ಬೆಂಗಳೂರು: ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

ಚಾರಣ ತಾಣಗಳಲ್ಲಿ ನಕಲಿ ಟಿಕೆಟ್‌ ಬಳಸಿ ಚಾರಣಕ್ಕೆ ತೆರಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಇದಕ್ಕಾಗಿ ಚಾರಣ ತಾಣಗಳಲ್ಲಿ ಸಂಚಾರ ದಳಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು 3,000 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಲಾಗಿದೆ. ತೆರವು ಮಾಡಲಾದ ಅರಣ್ಯ ಭೂಮಿಯಲ್ಲಿ ಸಸಿಗಳನ್ನು ನೆಡಲಾಗಿದೆ. ಈ ಮೂಲಕ ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದೇ ಒಂದು ವರ್ಷದ ಅವಧಿಯಲ್ಲಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಅರಣ್ಯ ಭೂಮಿಯನ್ನು ಮರುವಶಕ್ಕೆ ಪಡೆಯಲಾಗಿದೆ. ಅಲ್ಲೆಲ್ಲಾ ಅರಣ್ಯೀಕರಣ ಚಟುವಟಿಕೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...