ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಇದರ ಬಗ್ಗೆ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಯಡಿಯೂರಪ್ಪ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವೆಂದು ಈಗಾಗಲೇ ಹೇಳಿದ್ದು, ಏನಾಗುತ್ತಿದೆ ಎಂಬುದು ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರಿಗೆ ಮಾತ್ರ ಗೊತ್ತಿದೆ. ಇಬ್ಬರು ಒಟ್ಟಿಗೆ ಕುಳಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ನಾಯಕತ್ವ ಬದಲಾವಣೆಯ ಕುರಿತಂತೆ ನನಗೆ ಏನು ಗೊತ್ತಿಲ್ಲ. ನನಗೂ ಗೊಂದಲ ಇದೆ. ಗೊಂದಲವಿರುವುದು ನಿಜ ಎಂದು ಈಶ್ವರಪ್ಪ ತಿಳಿಸಿದ್ದಾರೆ.