ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಶಿವಮೊಗ್ಗದಲ್ಲಿ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ತಮಿಳು ಬಾಂಧವರ ಸಮಾವೇಶ ನಡೆದಿದೆ.
ಈ ಸಮಾವೇಶದಲ್ಲಿ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮೊದಲಾದವರು ಹಾಜರಿದ್ದು, ಕಾರ್ಯಕ್ರಮ ಆರಂಭಕ್ಕೂ ಮುನ್ನ ತಮಿಳು ನಾಡಗೀತೆಯನ್ನು ಪ್ರಸಾರ ಮಾಡಲಾಗಿದೆ.
ಆಗ ತಕ್ಷಣವೇ ಮಧ್ಯ ಪ್ರವೇಶಿಸಿದ ಈಶ್ವರಪ್ಪ ಮಧ್ಯದಲ್ಲಿಯೇ ಅದನ್ನು ನಿಲ್ಲಿಸುವಂತೆ ಕಾರ್ಯಕ್ರಮದ ಸಂಘಟಕರಿಗೆ ಸೂಚಿಸಿದ್ದು, ಬಳಿಕ ಕನ್ನಡ ನಾಡಗೀತೆ ಹಾಡಲು ಬರುವರು ಯಾರಾದರೂ ಇದ್ದರೆ ಬನ್ನಿ ಎಂದು ಹೇಳಿದ್ದಾರೆ. ಇದಾದ ನಂತರ ಕನ್ನಡ ನಾಡಗೀತೆ ಪ್ರಸಾರ ಮಾಡಲಾಗಿದ್ದು ಸಭಿಕರೆಲ್ಲರೂ ಎದ್ದುನಿಂತು ಗೌರವ ಸಲ್ಲಿಸಿದ್ದಾರೆ.
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಕರ್ನಾಟಕ ಬಿಜೆಪಿ ಚುನಾವಣಾ ಸಹ ಉಸ್ತುವಾರಿಯಾಗಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಘಟಕರು ಮೊದಲಿಗೆ ತಮಿಳು ನಾಡಗೀತೆಯನ್ನು ಪ್ರಸಾರ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.