ಮಂಡ್ಯ : ಸಂಸದ ಡಿ.ಕೆ. ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಈಶ್ವರಪ್ಪ ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಈಶ್ವರಪ್ಪ ಮೆದುಳಿಗೂ, ನಾಲಿಗೆಗೂ ಸಂಪರ್ಕ ಕಡಿತವಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಈಶ್ವರಪ್ಪ ಅವರ ಮೆದುಳಿಗೂ, ನಾಲಿಗೆಗೂ ಸಂಪರ್ಕ ಕಡಿತವಾಗಿದೆ. ಹಾಗಾಗಿ ಅವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಬಿಜೆಪಿಯವರಂತೆ ಕಾಂಗ್ರೆಸ್ ಶಾಸಕರು, ಸಂಸದರು ರಾಷ್ಟ್ರ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿಲ್ಲ ಎಂದರು.
ಕೇಸರಿ ಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇನೆ ಎಂದಿದ್ದ ಈಶ್ವರಪ್ಪ ಹಾಗೂ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದ ಸಂಸದ ಅನಂತಕುಮಾರ್ ಹೆಗಡೆಗೆ ಬಿಜೆಪಿಯವರು ಗುಂಡಿಕ್ಕಲಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.