
ನವದೆಹಲಿ: ಶಿವಮೊಗ್ಗ, ಬಳ್ಳಾರಿ, ತುಮಕೂರು, ಉಡುಪಿ ಸೇರಿದಂತೆ ಕರ್ನಾಟಕದ 8 ಕಡೆಗಳಲ್ಲಿ ಇಎಸ್ಐ ಆಸ್ಪತ್ರೆಗಳನ್ನು ಆರಂಭಿಸಲು ಉದ್ಯೋಗಿಗಳ ರಾಜ್ಯ ವಿಮಾನ ನಿಗಮ ತಾತ್ವಿಕ ಒಪ್ಪಿಗೆ ನೀಡಿದೆ.
ರಾಜ್ಯಸಭೆಯಲ್ಲಿ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವ ರಾಮೇಶ್ವರ ತೇಲಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕದ 8 ಕಡೆಗಳಲ್ಲಿ ಇಎಸ್ಐ ಆಸ್ಪತ್ರೆ ಆರಂಭಿಸಲು ಉದ್ಯೋಗಿಗಳ ರಾಜ್ಯ ವಿಮಾ ನಿಗಮ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಸದಸ್ಯ ನಾರಾಯಣ ಕೊರಗಪ್ಪ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಬೆಂಗಳೂರಿನ ಬೊಮ್ಮಸಂದ್ರದಲ್ಲಿ 200 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಆರಂಭಿಸಲಾಗುವುದು. ದೊಡ್ಡಬಳ್ಳಾಪುರ, ನರಸಾಪುರ, ಶಿವಮೊಗ್ಗ, ಹಾರೋಹಳ್ಳಿ, ತುಮಕೂರು, ಬಳ್ಳಾರಿ, ಉಡುಪಿಯಲ್ಲಿ ತಲಾ 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣಕ್ಕೆ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.