alex Certify ʼಗಾಂಧಿ ಜಯಂತಿʼ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಫರ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಗಾಂಧಿ ಜಯಂತಿʼ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಫರ್ಧೆ

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧೀ ತತ್ವ ಸಿದ್ಧಾಂತಗಳ ಮಹತ್ವದ ಬಗ್ಗೆ ವಿಶ್ಲೇಷಿಸಿ ಪ್ರಬಂಧವನ್ನು ಬರೆಯಲು ಅನುವಾಗುವಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪುಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.

ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳನ್ನು ಬರೆದು 2024ರ ಅಕ್ಟೋಬರ್ 31ರೊಳಗಾಗಿ Email: kstaessay.kannada@gmail.com & kstaessay.english@gmail.com ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ನವೆಂಬರ್ 12, 2024 (ಮಂಗಳವಾರ) ರಂದು ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವಿಳಾಸದಲ್ಲಿ ಆಯೋಜಿಸಲಾಗುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಸ್ಥಳದಲ್ಲೇ ಪ್ರಬಂಧವನ್ನು (ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಪ್ರತ್ಯೇಕವಾಗಿ) ಬರೆಯಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗೆ ಚಂದ್ರಶೇಖರಮೂರ್ತಿ ಎಸ್. ಮೊ.ಸಂಖ್ಯೆ 9686449019/ 9686919019 ಮತ್ತು ದೂ.ಸಂಖ್ಯೆ 080-29721550 ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್ ಸೈಟ್ www.kstacademy.in ವೀಕ್ಷಿಸಬಹುದಾಗಿದೆ.

ಈ ಪ್ರಬಂಧ ಸ್ಪರ್ಧೆಯ ಅವಕಾಶವನ್ನು ರಾಜ್ಯದ ಎಲ್ಲಾ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ. ಎ.ಎಂ ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...