ಬೆಂಗಳೂರು : ರಾಜ್ಯಾದ್ಯಂತ 5537 ಅರಿವು ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳುವ ಮತ್ತು ಓದುವ ಹವ್ಯಾಸವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 5537 ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಇದು ನಮ್ಮ ಅರಿವಿನ ಗ್ಯಾರಂಟಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಫುಲ ಅವಕಾಶಗಳಿರುವ ರಾಜ್ಯವಾಗಿ ಕರ್ನಾಟಕ ಹೊರಮೊಮ್ಮಿದ್ದು, ಈ ಮೂಲಕ ಭಾರತದ ನಾವೀನ್ಯತೆ, ಉತ್ಪಾದನೆ ಹಾಗೂ ಪ್ರತಿಭೆಯ ರಾಜಧಾನಿಯಾಗಿದೆ. ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.