ಬೆಂಗಳೂರು : ರಾಜ್ಯದ 43 ಕಡೆಗಳಲ್ಲಿ ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಜ್ಯದ 43 ಕಡೆಗಳಲ್ಲಿ ನೂತನ ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಮತ್ತು 11 ಕಡೆ ಸ್ವಯಂಚಾಲಿತ ಟೆಸ್ಟಿಂಗ್ ಕೇಂದ್ರಗಳನ್ನು ಈ ವರ್ಷಾಂತ್ಯದೊಳಗೆ ಸ್ಥಾಪನೆ ಮಾಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಏಳೆಂಟು ಜಿಲ್ಲೆಗಳಲ್ಲಿ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಗಳನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆರಂಭಿಸುತ್ತಿರುವುದು ದೇಶದಲ್ಲೇ ಇದೇ ಮೊದಲು ಎಂದು ಅವರು ಹೇಳಿದ್ದಾರೆ.