ಬೆಂಗಳೂರು : ಮೈಸೂರು, ಬೆಳಗಾವಿ, ಬೆಂಗಳೂರಲ್ಲಿ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆಗೊಂದಿರುವ ಮೂರು ದಿನಗಳ 27 ನೇ ಬೆಂಗಳೂರು ಟೆಕ್ ಸಮ್ಮಿಟ್ ನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿ ನಂತರ ಮಾತನಾಡಿದರು.
ಐಟಿ ಬಿಟಿ ಕ್ಷೇತ್ರದಲ್ಲಿ ಕರ್ನಾಟಕ ಮತ್ತಷ್ಟು ಅಭಿವೃದ್ದಿ ಹೊಂದಲು ಮೈಸೂರು, ಬೆಳಗಾವಿ, ಬೆಂಗಳೂರಲ್ಲಿ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂಡಿಯನ್ ವೆಂಚರ್ ಮತ್ತು ಆಲ್ಟರ್ನೇಟ್ ಕ್ಯಾಪಿಟಲ್ ಅಸೋಸಿಯೇಷನ್ (IVCA) ಜೊತೆಗಿನ ನಮ್ಮ ಸಹಯೋಗದ ಮೂಲಕ 200ಕ್ಕೂ ಹೆಚ್ಚು ನವೋದ್ಯಮಗಳಿಗೆ 100 ಧನಸಹಾಯ ಸಂಸ್ಥೆಗಳಿಂದ ಬಂಡವಾಳ ಹೂಡಿಕೆ, ಮಾರ್ಗದರ್ಶನ ಕೊಡಿಸಲಾಗಿದ್ದು ಬೆಳವಣಿಗೆಯ ಅವಕಾಶಗಳನ್ನು ಒದಗಿಸಲಾಗಿದೆ ಎಂದರು.
ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ (EMC) ನ್ನು ಸ್ಥಾಪಿಸಲಾಗುವುದು. ಇದು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಮತ್ತಷ್ಟು ಹೆಚ್ಚಿಸುತ್ತದೆಯಲ್ಲದೆ ಉದ್ಯೋಗಗಳನ್ನು ಸೃಷ್ಟಿಸಿ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಆರ್ಥಿಕ ಬೆಳವಣಿಗೆಗೆ ವೇಗ ನೀಡಲಿದೆ ಎಂದು ನಂಬಿದ್ದೇವೆ.
2022ರಿಂದ 2023 ರವರೆಗೆ 18.2% ಏರಿಕೆಯನ್ನು ಕಂಡಿರುವ ಕರ್ನಾಟಕದ ಸ್ಟಾರ್ಟ್ಅಪ್ ಪರಿಸರ ಗಮನಾರ್ಹ ಸಾಧನೆ ಮಾಡಿದೆ. ರಾಜ್ಯದಲ್ಲಿ ಒಟ್ಟು 3,036 ಸ್ಟಾರ್ಟ್ಅಪ್ಗಳಿವೆ. ಭಾರತದ ಒಟ್ಟು ಸ್ಟಾರ್ಟ್ಅಪ್ಗಳಲ್ಲಿ 8.7% ಸ್ಟಾರ್ಟ್ ಅಪ್ ಗಳನ್ನು ಹೊಂದುವ ಮೂಲಕ ರಾಜ್ಯವು ಅಗ್ರಸ್ಥಾನದಲ್ಲಿದೆ. ಈ ಯಶಸ್ಸು ರಾಜ್ಯದಲ್ಲಿನ ಉದ್ಯಮಿಗಳಿಗೆ ಸರ್ಕಾರ ನೀಡುತ್ತಿರುವ ಬೆಂಬಲ ಮತ್ತು ಪ್ರೋತ್ಸಾಹದಾಯಕವಾದ ಅವಕಾಶಗಳನ್ನು ತೋರುತ್ತದೆ ಎಂದಿದ್ದಾರೆ.
2022ರಿಂದ 2023 ರವರೆಗೆ 18.2% ಏರಿಕೆಯನ್ನು ಕಂಡಿರುವ ಕರ್ನಾಟಕದ ಸ್ಟಾರ್ಟ್ಅಪ್ ಪರಿಸರ ಗಮನಾರ್ಹ ಸಾಧನೆ ಮಾಡಿದೆ. ರಾಜ್ಯದಲ್ಲಿ ಒಟ್ಟು 3,036 ಸ್ಟಾರ್ಟ್ಅಪ್ಗಳಿವೆ. ಭಾರತದ ಒಟ್ಟು ಸ್ಟಾರ್ಟ್ಅಪ್ಗಳಲ್ಲಿ 8.7% ಸ್ಟಾರ್ಟ್ ಅಪ್ ಗಳನ್ನು ಹೊಂದುವ ಮೂಲಕ ರಾಜ್ಯವು ಅಗ್ರಸ್ಥಾನದಲ್ಲಿದೆ. ಈ ಯಶಸ್ಸು ರಾಜ್ಯದಲ್ಲಿನ ಉದ್ಯಮಿಗಳಿಗೆ ಸರ್ಕಾರ… pic.twitter.com/KUokOdiXJN
— Siddaramaiah (@siddaramaiah) November 19, 2024