alex Certify ಹಂಪಿ ವಿಶ್ವವಿದ್ಯಾಲಯದಲ್ಲಿ ‘ಜಕಣಾಚಾರಿ ಅಧ್ಯಯನ ಪೀಠ’ ಸ್ಥಾಪನೆ : CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಂಪಿ ವಿಶ್ವವಿದ್ಯಾಲಯದಲ್ಲಿ ‘ಜಕಣಾಚಾರಿ ಅಧ್ಯಯನ ಪೀಠ’ ಸ್ಥಾಪನೆ : CM ಸಿದ್ದರಾಮಯ್ಯ

ಬೆಂಗಳೂರು : ಹಂಪಿ ವಿಶ್ವವಿದ್ಯಾಲಯದಲ್ಲಿ ‘ಜಕಣಾಚಾರಿ ಅಧ್ಯಯನ ಪೀಠ’ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಮಹಾನ್ ವ್ಯಕ್ತಿಗಳ ಜೀವನ ಸಾಧನೆಗಳು, ಆದರ್ಶಗಳನ್ನು ಇಂದಿನ ತಲೆಮಾರು ಮೈಗೂಡಿಸಿಕೊಳ್ಳಬೇಕಾದರೆ ಅವರ ಬಗ್ಗೆ ಅಧ್ಯಯನಗಳು ನಡೆಯಬೇಕು. ಈ ಉದ್ದೇಶದಿಂದ ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು. ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನವಾಗಬೇಕು. ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019 ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು. ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ. ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರು ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ ವಿಶ್ವಕರ್ಮ ಸಮಾಜದಲ್ಲಿ ಹುಟ್ಟಿದವರು. ಅವರು ಬೆಳೆದ ಎತ್ತರ ಜನರಿಗೆ ತಿಳಿಯಬಾರದೆಂದು ಇತಿಹಾಸ ತಿರುಚುವ ಪ್ರಯತ್ನ ಮಾಡಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳು ಈ ಕೆಲಸ ಮಾಡಿದ್ದರೂ ಮಾಡಿರಬಹುದು. ಅಮರ ಶಿಲ್ಪಿ ಜಕಣಾಚಾರಿ ಅವರ ಇತಿಹಾಸ ನಮ್ಮ ಮುಂದಿದೆ.

ವಿಶ್ವಕರ್ಮ ಅಭಿವೃದ್ಧಿ ನಿಗಮ, ವಿಶ್ವಕರ್ಮ ಜಯಂತಿಯನ್ನು ಆಚರಿಸುವ ತೀರ್ಮಾನ ನಮ್ಮ ಸರ್ಕಾರವೇ ಹಿಂದೆ ಮಾಡಿತ್ತು.ನಮ್ಮ ಸಂವಿಧಾನ ಜಾತಿ ರಹಿತ, ವರ್ಗರಹಿತ, ಜಾತ್ಯಾತೀತ ಸಮಸಮಾಜ ನಿರ್ಮಾಣ ಮಾಡಬೇಕೆಂದು ಹೇಳಿದೆ. ಸ್ವಾರ್ಥಕ್ಕಾಗಿ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಶತ-ಶತಮಾನಗಳಿಂದ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಸಮಾನತೆಗೆ ಬಲಿಯಾಗಿರುವ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರು ಮುಖ್ಯವಾಹಿನಿಗೆ ಸೇರುವಂತಾಗಬೇಕು. ಎಲ್ಲರಿಗೂ ಅವಕಾಶ ಒದಗಿಸುವುದು ಸರ್ಕಾರದ ಜವಾಬ್ದಾರಿ ಹಾಗೂ ಕರ್ತವ್ಯ ಎಂದರು.

ಚಲನಶೀಲತೆ ಇಲ್ಲದ ಸಮಾಜದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿಯೇ ಸಂವಿಧಾನದ ಪೀಠಿಕೆವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆಯಬೇಕು. ಸಂವಿಧಾನದ ವಿರೋಧಿಗಳು ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಸಂವಿಧಾನದ ಆಶಯಗಳನ್ನು ಈಡೇರಿಸಬೇಕು. ಇದಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...