ವಿಜಯಪುರ : ವಿಜಯಪುರದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ ಮಾಡುವುದಾಗಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಬಹುರಾಷ್ಟ್ರೀಯ ಕಂಪನಿಯಾದ ಲುಲು ಗ್ರೂಪ್ ನ ರಫ್ತುವಿಭಾಗದ CEO ನಜ್ಬುದ್ಧೀನ್, ನಿರ್ದೇಶಕ ಅನಂತ ಹಾಗೂ ಅವರ ತಂಡ ಶುಕ್ರವಾರ ಬೆಂಗಳೂರಿನ ಖನಿಜಭವನದಲ್ಲಿ ಸಚಿವರನ್ನು ಭೇಟಿ ಮಾಡಿದರು. ರಫ್ತು ಆಧಾರಿತ ಸುಸಜ್ಜಿತ ಆಹಾರ ಸಂಸ್ಕರಣ ಘಟಕವನ್ನು ವಿಜಯಪುರದಲ್ಲಿ ಸ್ಥಾಪಿಸುವ ಕುರಿತು ಚರ್ಚಿಸಿದರು.
ಸ್ವಿಟ್ಜರ್ಲೆಂಡ್ ನ ದಾವೋಸ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ಈ ಸಂಬಂಧ ಸಂಸ್ಥೆ ಒಪ್ಪಂದಕ್ಕೂ ಸಹಿ ಹಾಕಿತ್ತು. ಅದರ ಮುಂದುವರೆದ ಭಾಗವಾಗಿ ಶುಕ್ರವಾರದ ಸಭೆ ನಡೆದಿದ್ದು, ಸರ್ಕಾರದ ಕಡೆಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.