alex Certify ‘ಅಂತಾರಾಷ್ಟ್ರೀಯ ಯೋಗ’ ದಿನ ಘೋಷಣೆಗೆ ಮುನ್ನವೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸಿದ್ದೆ ; ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಂತಾರಾಷ್ಟ್ರೀಯ ಯೋಗ’ ದಿನ ಘೋಷಣೆಗೆ ಮುನ್ನವೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸಿದ್ದೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಣೆ ಮಾಡುವುದಕ್ಕೆ ಮೊದಲೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸುವ ಮೂಲಕ ಯೋಗ ವಿಜ್ಞಾನವನ್ನು ಜನರಲ್ಲಿ ವಿಸ್ತರಿಸುವ ಕಾರ್ಯಕ್ಕೆ ಮುಂದಾಗಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ “ಯೋಗ ರತ್ನ-2024” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದರು.

ವರ್ಗರಹಿತ, ಜಾತಿ ರಹಿತ ಸಮ ಸಮಾಜದ ಮೌಲ್ಯವನ್ನು ಮನುಕುಲದಲ್ಲಿ ಬಿತ್ತಿದ ಬಸವ ತತ್ವವೇ ಶಾಶ್ವತವಾದದ್ದು. ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಣೆ ಮಾಡುವುದಕ್ಕೆ ಮೊದಲೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸುವ ಮೂಲಕ ಯೋಗ ವಿಜ್ಞಾನವನ್ನು ಜನರಲ್ಲಿ ವಿಸ್ತರಿಸುವ ಕಾರ್ಯಕ್ಕೆ ಮುಂದಾಗಿದ್ದೆ. ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತುಡಿಯುತ್ತಿರುವ ಸ್ವಾಮೀಜಿಗಳು ಒಟ್ಟಾಗಿ ನನ್ನನ್ನು ಮತ್ತು ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಒಪ್ಪಿ ಆಶೀರ್ವದಿಸಿದಕ್ಕಾಗಿ ಸ್ವಾಮೀಜಿಗಳ ಸಮೂಹಕ್ಕೆ ಧನ್ಯವಾದಗಳು. ನಿಮ್ಮ ಮನಸ್ಸು, ದೇಹ, ಅಧ್ಯಾತ್ಮಿಕ ಚೈತನ್ಯ ಆರೋಗ್ಯಕರವಾಗಿ ಇರಬೇಕಾದರೆ ಯೋಗ ವಿಜ್ಞಾನದ ಜ್ಞಾನವನ್ನು ಕಲಿತು, ಅಭ್ಯಾಸ ಮಾಡಬೇಕು. ಇದರಿಂದ ಮನಸ್ಸು, ದೇಹ ಮತ್ತು ದೇಶ ರೋಗ ರಹಿತವಾಗಿ ಸಮಾಜಮುಖಿಯಾಗಿ ಬೆಳೆಯುತ್ತದೆ. ಪರಸ್ಪರ ಮನುಷ್ಯ ಗೌರವ, ಮನುಷ್ಯ ಪ್ರೇಮ ಯೋಗ ವಿಜ್ಞಾನದಿಂದ ಬೆಳೆಯುತ್ತದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...