ಪ್ರವಾದಿ ಮಹಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೆ ಪ್ರತಿಭಟನೆ ಸಂದರ್ಭದಲ್ಲಿ ಉತ್ತರ ಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಕೂಡ ನಡೆದಿದೆ.
ನೂಪುರ್ ಶರ್ಮ ಹೇಳಿಕೆಗೆ ಸೌದಿ ಅರೇಬಿಯಾ ಸೇರಿದಂತೆ ಪಾಶ್ಚಾತ್ಯ ರಾಷ್ಟ್ರಗಳಿಂದಲೂ ವಿರೋಧ ವ್ಯಕ್ತವಾಗಿದ್ದು, ಆ ಬಳಿಕ ನೂಪುರ್ ಶರ್ಮ ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಗಿತ್ತು. ನೂಪುರ್ ಶರ್ಮಾ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಬಂಧನಕ್ಕೆ ಒತ್ತಾಯಿಸಲಾಗುತ್ತಿದೆ.
ಕಾರು – ಬೈಕಿಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರ ಸಾವು
ಇದರ ಮಧ್ಯೆ ಡಚ್ಚ್ ಸಂಸದ ಗೀರ್ಟ್ ವೈಲ್ಡರ್ಸ್ ನೂಪುರ್ ಶರ್ಮ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದರು. ಆ ಬಳಿಕ ಅವರಿಗೆ ನೂರಾರು ಕೊಲೆ ಬೆದರಿಕೆಗಳು ಬಂದಿದ್ದು, ಈಗ ಮತ್ತೊಮ್ಮೆ ಟ್ವೀಟ್ ಮಾಡಿರುವ ಅವರು, ಈ ಕೊಲೆ ಬೆದರಿಕೆಗಳ ಬಳಿಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಕ್ಕೆ ಮತ್ತಷ್ಟು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ.
ಈ ಮೊದಲು ಟ್ವೀಟ್ ಮಾಡಿದ್ದ ಅವರು ನಾನು ಭಾರತೀಯನಲ್ಲ ಅಥವಾ ಹಿಂದೂ ಅಲ್ಲ. ಆದರೆ ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಕ್ಕೆ ನೂಪುರ್ ಶರ್ಮಾ ಹೇಳಿದ್ದು ಸರಿ ಇದೆ ಎಂದಿದ್ದರು.