ಬೆಂಗಳೂರು : ಬೆಂಗಳೂರಿನ ಏಕೈಕ ಸಂಜೆ ಎಂಜಿನಿಯರಿಂಗ್ ಕಾಲೇಜು ಬಂದ್ ಆಗಿದೆ. ಹೌದು. ಸಂಜೆ ಇಂಜಿನಿಯರಿಂಗ್ ಕಾಲೇಜು ನಡೆಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅನುಮತಿ ನೀಡಲು ನಿರಾಕರಿಸಿದ ಕಾರಣ ಸಂಜೆ ಎಂಜಿನಿಯರಿಂಗ್ ಕಾಲೇಜು ಬಂದ್ ಆಗಿದೆ.
ಬಸವನಗುಡಿಯಲ್ಲಿರುವ ಬಿಎಂಎಸ್ ಇವಿನಿಂಗ್ ಕಾಲೇಜ್ ಆಫ್ ಎಂಜಿನಿಯರಿಂಗ್ ಕಾಲೇಜನ್ನು ಮುಚ್ಚಲಾಗಿದ್ದು, 2023-24 ನೇ ಶೈಕ್ಷಣಿಕ ವರ್ಷದಿಂದ ಕಾಲೇಜು ನಡೆಸಲು ಅನುಮತಿ ನಿರಾಕರಿಸಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಆದೇಶ ಹೊರಡಿಸಿದ್ದು, ಅದರಂತೆ ಕಾಲೇಜು ಮುಚ್ಚಲಾಗಿದೆ.ಬಿಎಂಎಸ್ ಈವ್ನಿಂಗ್ ಕಾಲೇಜ್ ಆಫ್ ಇಂಜಿನಿಯರಿಂಗ್ ಸೇರಿದಂತೆ ರಾಜ್ಯದಲ್ಲಿ ಈ ಹಿಂದೆ 12 ಸಂಜೆ ಇಂಜಿನಿಯರಿಂಗ್ ಕಾಲೇಜುಗಳಿದ್ದವು.
ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಎಸ್. ಮುರಳೀಧರ ಪ್ರತಿಕ್ರಿಯೆ ನೀಡಿದ್ದು, ಸಂಜೆ ಎಂಜಿನಿಯರಿಂಗ್ ಕಾಲೇಜಿಗೆ ಅನುಮತಿ ನೀಡುವಂತೆ ನಾವು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ ಎಐಸಿಟಿಇ ಆದೇಶದ ಆಧಾರದ ಮೇಲೆ ಸರ್ಕಾರ ಅನುಮತಿ ನಿರಾಕರಿಸಿದೆ. ಹೀಗಾಗಿ ಈ ವರ್ಷದಿಂದ ಸಂಜೆ ಇಂಜಿನಿಯರಿಂಗ್ ಕಾಲೇಜನ್ನು ಶಾಶ್ವತವಾಗಿ ಮುಚ್ಚಿದ್ದೇವೆ ಎಂದು ಹೇಳಿದ್ದಾರೆ.