ನವದೆಹಲಿ: ಇವಿಎಂ ಮತಗಳ ಜೊತೆಗೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.
ಇವಿಎಂ ಮತಗಳನ್ನು ಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳಿಂದ ಕ್ರಾಸ್ ವೆರಿಫಿಕೇಷನ್ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಒಂದು ವ್ಯವಸ್ಥೆಯನ್ನು ಕುರುಡಾಗಿ ಅನುಮಾನಿಸಬಾರದು. ರಚನಾತ್ಮಕ ಸಲಹೆಗಳಿದ್ದರೆ ನೀಡಿ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲಾ ಸ್ತಂಭಗಳ ನಡುವೆ ವಿಶ್ವಾಸ ಇರುವುದು ಅವಶ್ಯಕವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸಿಂಬಲ್ ಲೋಡಿಂಗ್ ಯೂನಿಟ್ ನ್ನು ಸೀಲ್ ಮಾಡಿ 45 ದಿನ ಇಡುವಂತೆಯೂ ಮತ್ತು ಅಭ್ಯರ್ಥಿಗಳ ಮನವಿ ಮೇರೆಗೆ ವಿ ಪಾಟ್ ವೆರಿಫಿಕೇಶನ್ ಮಾಡಲು ಅವಕಾಶ ನೀಡುವಂತೆಯೂ ಕೋರ್ಟ್ ಆದೇಶಿಸಿದೆ.