ಅಪರಾಧ ಪ್ರಕರಣದಲ್ಲಿ ಪಾಲ್ಗೊಂಡು ಬಳಿಕ ಪೊಲೀಸರ ಕೈಗೆ ಸಿಗದಂತೆ ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕನೊಬ್ಬ ಇದೀಗ ಬಂಧನಕ್ಕೊಳಗಾಗಿದ್ದಾನೆ.
ಪ್ರಕರಣದ ವಿವರ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಗೋವಿಂದಗಂಜ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಂಜನ್ ತಿವಾರಿ 1998 ರಲ್ಲಿ ಉತ್ತರ ಪ್ರದೇಶದ ಗೋರಕ್ಪುರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದ.
ಬಳಿಕ ಆತ ತಲೆಮರೆಸಿಕೊಂಡಿದ್ದು ಸುಳಿವು ನೀಡಿದವರಿಗೆ 25,000 ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಇದೀಗ ಭಾರತ – ನೇಪಾಳ ಗಡಿಯಲ್ಲಿ ಈತನನ್ನು ಬಂಧಿಸಲಾಗಿದ್ದು, ಕಠ್ಮಂಡುಗೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ.