ರಾಮನಗರ : ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ನಾಪತ್ತೆಯಾಗಿದ್ದು, ಅವರನ್ನು ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಿಂದ ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೇರಿ ಗ್ರಾಮದ ತೋಟದ ಮನೆಯಿಂದ ಮಹಾದೇವಯ್ಯ ತಂಗಿದ್ದರು. ಆದರೆ ಧಿಡೀರ್ ನಾಪತ್ತೆಯಾದ ಹಿನ್ನೆಲೆ ಆತಂಕ ಸೃಷ್ಟಿಯಾಗಿದೆ. ಅಲ್ಲದೇ ಮಹದೇವಯ್ಯ ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ತೋಟದ ಮನೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅವರನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದಲ್ಲಿ ತಂಗಿದ್ದರು.ಆಗಾಗ ಮಹದೇವಯ್ಯ ತೋಟದ ಮನೆಗೆ ಬಂದು ತಂಗುತ್ತಿದ್ದರು . ಘಟನೆ ನಡೆದ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.