alex Certify BREAKING NEWS: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅದೃಷ್ಟವಶಾತ್ ಮಾಜಿ ಶಾಸಕ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅದೃಷ್ಟವಶಾತ್ ಮಾಜಿ ಶಾಸಕ ಪಾರು

ಕಾರವಾರ: ವಿದ್ಯುತ್ ಕಂಬಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿಯಾಗಿ, ಮಾಜಿ ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಹಾರವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಸಾವು-ನೋವು ಸಂಭವಿಸಿಲ್ಲ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರಿನಲ್ಲಿ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

ವಿ.ಎಸ್.ಪಾಟೀಲ್ ಅವರ ಎದೆಗೆ ಪೆಟ್ಟಾಗಿದೆ. ಕಾರು ಚಾಲಕ ಆನಂದ್ ಕಣ್ಣಿಗೆ ಗಾಯಗಳಾಗಿವೆ. ಇಬ್ಬರನ್ನು ಮುಂಡಗೋಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...