
ಕಾರವಾರ: ಮಾಜಿ ಶಾಸಕ ವಿ.ಎಸ್.ಪಾಟೀಲ್ ಪುತ್ರ ಬಾಪುಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಎಎಸ್ಐ ಮೇಲೆ ಹಲ್ಲೆ, ನಿಂದನೆ ಹಾಗೂ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಪುಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಎಎಸ್ಐ ಬಾಲಕೃಷ್ಣ ಪಾಲೇಕರ್ ಎಂಬುವವರ ಮೇಲೆ ಹಲ್ಲೆ ನಡೆಸಿ, ನಿಂದಿಸಿದ ಪ್ರಕರಣದಲ್ಲಿ ಹಾಗೂ 2 ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಪುಗೌಡ ಪಾಟೀಲ್ ನನ್ನು ಬಂಧಿಸಲಾಗಿದ್ದು, ಸದ್ಯ ಶಿರಸಿಯ ಸಬ್ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.