ಬೆಂಗಳೂರು: ರಾಜ್ಯಸಭಾ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿ ಜೆಡಿಎಸ್ ವಿರುದ್ಧ ಸಿಡಿದೆದ್ದಿದ್ದ ಶಾಸಕ ಶ್ರೀನಿವಾಸ್ ಗೌಡ ಹಾಗೂ ಗುಬ್ಬಿ ಶ್ರೀನಿವಾಸ್ ಬಳಿಕ ಇದೀಗ ಜೆಡಿಎಸ್ ನ ಮತ್ತೋರ್ವ ನಾಯಕರು ಪಕ್ಷ ತೊರೆಯಲು ಸಜ್ಜಾಗಿದ್ದಾರೆ.
ಗಂಗಾವತಿ ಮಾಜಿ ಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಹೆಚ್ ಆರ್ ಶ್ರೀನಾಥ್ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಶ್ರೀನಾಥ್ ಪಕ್ಷ ಸೇರ್ಪಡೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಹೆಚ್.ಆರ್.ಶ್ರೀನಾಥ್ ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. ಇದೀಗ ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಮತ್ತೆ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶ್ರೀನಾಥ್ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.