ನವದೆಹಲಿ: ಎರಡು ಬಾರಿ ಪಂಜಾಬ್ ಮುಖ್ಯಮಂತ್ರಿ ಆಗಿದ್ದ ಅಮರೀಂದರ್ ಸಿಂಗ್ ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಲಿದ್ದು, ಇದೇ ವೇಳೆ ಅವರು ಬಿಜೆಪಿ ಸೇರುವುದು ಖಚಿತವಾಗಿದೆ.
ಸೆಪ್ಟೆಂಬರ್ 19 ರ ಸೋಮವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ, ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಮರೀಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ 7 ಮಾಜಿ ಶಾಸಕರು, ಒಬ್ಬ ಸಂಸದರು ಕೂಡ ಮಾಜಿ ಸಿಎಂ ಅಮರೀಂದರ್ ಸಿಂಗ್ ಅವರೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಅನಿರೀಕ್ಷಿತವಾಗಿ ನಿರ್ಗಮಿಸಿದ ಅಮರೀಂದರ್ ಸಿಂಗ್ ಕಾಂಗ್ರೆಸ್ ಪಕ್ಷವನ್ನು ತೊರೆದು ಹೊಸ ಪಕ್ಷ ಸ್ಥಾಪನೆ ಮಾಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರಿಗೆ ತೀವ್ರ ಹಿನ್ನಡೆಯಾಗಿತ್ತು.