alex Certify BIG NEWS: ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದ್ರೂ ನಿಗದಿಯಂತೆ ನಡೆಯಲಿದೆ ಸಹಾಯಕ ಪ್ರಾಧ್ಯಾಪಕರ ಹುದ್ದೆ ಆಯ್ಕೆ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದ್ರೂ ನಿಗದಿಯಂತೆ ನಡೆಯಲಿದೆ ಸಹಾಯಕ ಪ್ರಾಧ್ಯಾಪಕರ ಹುದ್ದೆ ಆಯ್ಕೆ ಪರೀಕ್ಷೆ

ಶಿವಮೊಗ್ಗ/ಮಂಗಳೂರು: ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು.

ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು‌ ಮೊದಲೇ ನಿಗದಿಯಾದಂತೆ ಮೂರೂ ಕೇಂದ್ರಗಳಲ್ಲಿ(ಶಿವಮೊಗ್ಗದ ಹೆಚ್.ಎಸ್.ಆರ್ ಪದವಿ ಪೂರ್ವ ಕಾಲೇಜು, ಸರ್ಕಾರಿ ಪಪೂ ಕಾಲೇಜು, ಸರ್ಕಾರಿ ಬಾಲಿಕಾ ಪಪೂ‌ಕಾಲೇಜು,) ಮಂಗಳವಾರ ನಡೆಯಲಿವೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಪರೀಕ್ಷೆ ನಡೆಯಲಿದೆ.

ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...